ಸ್ನೇಹಿತರೇ, ಸೌತ್ ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಷನ್ ಬ್ಯಾಂಕ್ ವತಿಯಿಂದ ಸಂಸ್ಥೆಯಲ್ಲಿ ಖಾಲಿ ಇರುವ 123 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ(secend division clerk) ನೇಮಕಕ್ಕೆ ಅರ್ಜಿ ಆಹ್ವಾನವನ್ನು ಮಾಡಲಾಗಿದ್ದು, ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ಕೈಗೊಂಡು ಎರಡನೇ ಹಂತದಲ್ಲಿ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 18, 2024 ರ ಒಳಗಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗುತ್ತದೆ.
ಎಸ್‌ಸಿಡಿಸಿಸಿ ಬ್ಯಾಂಕ್ ನೇಮಕಾತಿ 2024 (SCDCC Bank Recruitment 2024) ಅರ್ಜಿ ಸಲ್ಲಿಕೆ ಮಾಡಲು ಅಭ್ಯರ್ಥಿಗಳಿಗೆ ಬೇಕಾಗುವ ವಿಧ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ ಮತ್ತು ನೇಮಕಾತಿಯ ಆಯ್ಕೆ ವಿಧಾನ ಇನ್ನಿತರ ಪ್ರಮುಖ ಅಂಶಗಳ ಮಾಹಿತಿಯನ್ನು ಲೇಖನದಲ್ಲಿ ನೀಡಲಾಗಿದೆ. ಎಸ್‌ಸಿಡಿಸಿಸಿ ಬ್ಯಾಂಕ್ ನಲ್ಲಿ ಕೆಲಸ ಮಾಡಲು ಬಯಸುವವರು ಮೊದಲು ಎಸ್‌ಸಿಡಿಸಿಸಿ ಬ್ಯಾಂಕ್ ಅಧಿಕ್ರತ ಅಧಿಸೂಚನೆಯಲ್ಲಿ (SCDCC Bank Recruitment official notification) ಪ್ರಕಟಿಸಿರುವ ಅರ್ಹತಾ ಮಾನದಂಡಗಳ ಬಗ್ಗೆ ಮಾಹಿತಿ ಪಡೆದು ಅರ್ಜಿ ಸಲ್ಲಿಸುವುದು ಉತ್ತಮ.
ಹುದ್ದೆಗಳ ವಿವರ
ಎಸ್‌ಸಿಡಿಸಿಸಿ ಬ್ಯಾಂಕ್ ನೇಮಕಾತಿಯು (SCDCC Bank Recruitment 2024) ಒಟ್ಟು 123 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ (SDA) ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳನ್ನು ಮಂಗಳೂರಿನಲ್ಲಿ ನಿಯೋಜಿಸಲಾಗುವುದು.
ವಯೋಮಿತಿ
ಎಸ್‌ಸಿಡಿಸಿಸಿ ಬ್ಯಾಂಕ್ ಅಧಿಕ್ರತ ಅಧಿಸೂಚನೆಯಲ್ಲಿ (SCDCC Bank Recruitment official notification) ಪ್ರಕಟಿಸಿರುವ ಅರ್ಹತಾ ಮಾನದಂಡಗಳ ಪ್ರಕಾರ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳಾಗಿರಬೇಕು ಮತ್ತು ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 05 ವರ್ಷ ವಯೋಸಡಲಿಕೆ ನಿಯಮ ಅನ್ವಯವಾಗಲಿದೆ.
ವಿದ್ಯಾರ್ಹತೆ
- ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 50% ಅಂಕಗಳೊಂದಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
- ಅಭ್ಯರ್ಥಿಗಳು ಕಂಪ್ಯೂಟರ್ ಜ್ನಾನವನ್ನು ಹೊಂದಿರಬೇಕು
ಅರ್ಜಿ ಶುಲ್ಕ
ಎಸ್‌ಸಿಡಿಸಿಸಿ ಬ್ಯಾಂಕ್ ಅಧಿಕ್ರತ ಅಧಿಸೂಚನೆಯಲ್ಲಿ (SCDCC Bank Recruitment official notification) ಪ್ರಕಟಿಸಿರುವಂತೆ, ಅರ್ಜಿ ಶುಲ್ಕವು ಈ ಕೆಳಗಿನಂತಿದೆ
- ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು: 500 ರೂ
- ಇತರೆ ವರ್ಗದ ಅಭ್ಯರ್ಥಿಗಳಿಗೆ: 1180 ರೂ
ಎಸ್‌ಸಿಡಿಸಿಸಿ ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ 01 ಜುಲೈ, 2024 ರಂದು ಆರಂಭಗೊಂಡಿದ್ದು ಆಸಕ್ತರು ದಿನಾಂಕ 18 ಜುಲೈ, 2024 ರ ಒಳಗಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ. ನೇಮಕಾತಿಗೆ ಸಂಬಂದಿತ ಎಲ್ಲ ಪ್ರಮುಖ ಲಿಂಕ್ ಗಳ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.